ಎಲ್ಲರಿಗು ನಾನು - ನನ್ನ ಮನಸ್ಸು ಮಾಡುವ ವಂದನೆಗಳು.
ಈ ಮನಸ್ಸೆಂಬುದು "ಭಾವನೆಗಳಿಗೆ" ಹಿಡಿದ ಕನ್ನಡಿ ಮತ್ತು ಒಬ್ಬ ಮನುಷ್ಯನ ಗುಣಗಳಿಗೆ ಇರುವ ಕೈಪಿಡಿ.
ವಿವಿಧ ಭಾವನೆಗಳಿಂದ ರೂಪಗೊಂಡವನೆ ಮನುಷ್ಯ. ಹಾಗಾಗಿ ಇಲ್ಲಿ "ನಾನು" ಎಂಬ ಪದದ ಅರ್ಥ "ಭಾವನೆ" ಎಂಬುದು.
ಹೇಗೆ, ಕನ್ನಡಿಯಲ್ಲಿ ಅದರ ಮುಂದಿರುವ ವಸ್ತುವಿನ ಆಕಾರ ಮತ್ತು ಅದರ ಹಿಂದಿನ ವಸ್ತುಗಳು ಕಾಣುವುದೊ, ಹಾಗೆ ಈ ಮನಸ್ಸೆಂಬ ಕನ್ನಡಿಯಲ್ಲಿ ಕಾಣುವುದು ಭಾವನೆ ಮತ್ತು ಅದರ ಹಿಂದಿರುವ ನೆನಪುಗಳು ಮಾತ್ರ.
ಹಾಗಾಗಿ ಇಲ್ಲಿ "ಭಾವಕನ್ನಡಿ" ಎಂಬುದರ ಅರ್ಥ "ಮನಸ್ಸು" ಎಂಬುದು!
ಶನಿವಾರ, ಜನವರಿ 12, 2013
ಹೊಸತು
ಹೊಸ ವರ್ಷದ ಹೊಸ ಕವನವಿದು
ಪದಗಳು ಹಳೆಯವು, ಆದರೆ ಹೊಸತು ಈ ಭಾವ ಅದೇ ಜಡ ದೇಹ, ಒಳಗೆ ಚೈತನ್ಯ ತುಂಬಿದ ಜೀವ.
ಕಾಡುವ ನೆನಪುಗಳು, ಆದರೂ ಬರವಣಿಗೆಯ ನೆನೆದು ಪುಳಕ ತೀಡುವ ಯೋಚನೆಗಳು, ಆದರೂ ನಿಲ್ಲದ ಬರೆಯುವ ತವಕ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ